ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.
ಲಕ್ಷ್ಮೀಂದ್ರ ನಗರದ ಬಳಿ ಈ ಘಟನೆ ನಡೆದಿದ್ದು ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ.

ಚಾಲಕನ ಅತಿ ವೇಗದ ಹಾಗೂ ನಿರ್ಲಕ್ಷ್ಯದ ಚಾಲನೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಸ್ಥಳಕ್ಕೆ ಮಣಿಪಾಲ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.




