ಬ್ರಹ್ಮಾವರ: ರಸ್ತೆ ಬದಿ ಮಲಗಿದ್ದ ದನವನ್ನು ಕಾರಿನಲ್ಲಿ ತುಂಬಿಸಿ ಅಕ್ರಮವಾಗಿ ಮತ್ತು ಹಿಂಸಾತ್ಮಕವಾಗಿ ಸಾಗಿಸಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮುಜಾಫಿರ್ ಮತ್ತು ರಾಮ ನಾಯ್ಕ ಎಂದು ಗುರುತಿಸಲಾಗಿದೆ.

ಜುಲೈ 20 ರಂದು ನೀರ್ಜಡ್ಡು ಎಂಬಲ್ಲಿ ರಸ್ತೆಯ ಬದಿ ಮಲಗಿದ್ದ ದನವನ್ನು ಮೂವರು ಸೇರಿಕೊಂಡು ಹಗ್ಗ ಕಟ್ಟಿ ಕಾರಿನಲ್ಲಿ ತುಂಬಿಸುತ್ತಿದ್ದಾಗ ಬೈಕಿನಲ್ಲಿ ಬಂದ ಅಪರಿಚಿತ ವ್ಯಕ್ತಿಯನ್ನು ಕಂಡು ಓರ್ವ ಪರಾರಿಯಾಗಿದ್ದಾನೆ. ಆದರೆ ಇಬ್ಬರು ದನವನ್ನು ಕಾರಿನಲ್ಲಿ ತುಂಬಿಸಿಕೊಂಡು ಹೋಗಿದ್ದರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ತಲೆ ಮರೆಸಿಕೊಂಡಿರುವ ಇನ್ನೋರ್ವ ಆರೋಪಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.


