ಜು. 28 ಕರಾವಳಿಯಲ್ಲಿ ಹೆಚ್ಚಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 28ರವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಜುಲೈ 28ರ ವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಕರ್ನಾಟಕದಲ್ಲಿ ಪ್ರತಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಮೀನುಗಾರರು ಜುಲೈ 25ರ ವರೆಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Leave a Reply

Your email address will not be published. Required fields are marked *