Breaking
19 Sep 2026, Sat

ಮಂಗಳೂರು: 24 ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್‌ ವಶಕ್ಕೆ

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಂಜನಾಡಿ ಕಲ್ಕಟ್ಟ ಬದ್ರಿಯ ನಗರ ನಿವಾಸಿ ಮೊಹಮ್ಮದ್‌ ಅಬ್ದುಲ್‌ ಫಯಾನ್‌ (27) ಎಂದು ಗುರುತಿಸಲಾಗಿದೆ.

ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು, ಕೊಲೆಯತ್ನ, ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 24 ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನಿನಲ್ಲಿ ಬಿಡುಗಡೆಗೊಂಡ ಈತ ಬಳಿಕ ತಲೆಮರೆಸಿಕೊಂಡಿದ್ದ.

ಆರೋಪಿಯನ್ನು ಸಿಸಿಬಿ ಪೊಲೀಸರು ಬರ್ಕೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Leave a Reply

Your email address will not be published. Required fields are marked *