Breaking
19 Sep 2026, Sat

2021 ರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ನಡೆದಿದ್ದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ಮಂಜೇಶ್ವರದ ಯತಿರಾಜ್ (34) ಎಂದು ಗುರುತಿಸಲಾಗಿದೆ.

2022ರಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, 7 ಬಾರಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನಲೆಯಲ್ಲಿ ವಾರಂಟ್‌ ಕೂಡ ಜಾರಿ ಮಾಡಲಾಗಿತ್ತು. ನ್ಯಾಯಾಲಯದ ಆದೇಶ ಉಲ್ಲಂಘಿಸಿ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಈತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 269 ಬಿಎನ್‍ಎಸ್ 2023ರಂತೆ ಪ್ರಕರಣ ದಾಖಲಿಕೊಂಡಿದ್ದಾರೆ.

ಹಲವು ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪುತ್ತೂರು ನಗರ, ಬಂಟ್ವಾಳ ನಗರ, ವೇಣೂರು ಪೊಲೀಸ್ ಠಾಣೆಗಳಲ್ಲಿ ಮತ್ತು ಈತನ ವಿರುದ್ಧ ಕೊಣಾಜೆ, ಕಾವೂರು, ವಿಟ್ಲ ಠಾಣೆಗಳಲ್ಲಿಈತನ ವಿರುದ್ದ ಪ್ರಕರಣ ದಾಖಲಾಗಿದಲ್ಲದೇ ಒಟ್ಟು ಸುಮಾರು 7 ಪ್ರಕರಣಗಳು ದಾಖಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *