Breaking
22 Mar 2026, Sun

ಮನೆಯಿಂದ ಕೆಲಸಕ್ಕೆಂದು ಹೊರಟ ಆ್ಯಂಬುಲೆನ್ಸ್ ಚಾಲಕ ನಾಪತ್ತೆ

ಕಡಬ: ಮನೆಯಿಂದ ಕೆಲಸಕ್ಕೆಂದು ಹೊರಟ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆ್ಯಂಬುಲೆನ್ಸ್ ಚಾಲಕ ಹೊನ್ನಪ್ಪ ದೇವರಗದ್ದೆ (52) ಜುಲೈ 22 ರಂದು ನಾಪತ್ತೆಯಾಗಿದ್ದಾರೆ.

ಜುಲೈ 22 ರ ಬೆಳಗ್ಗೆ ಹೊನ್ನಪ್ಪ ಅವರು ಕೆಲಸಕ್ಕೆಂದು ಹೊರಟವರು ಬಳಿಕ ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಅಗ್ರಹಾರ ದೇವಸ್ಥಾನದ ಬಳಿ ಕಾಣಿಸಿಕೊಂಡು ನಂತರ ಕುಮಾರಧಾರ ನದಿಯ ಕಡೆಗೆ ಹೋಗುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಹೊನ್ನಪ್ಪ ಅವರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಕುಮಾರಧಾರ ನದಿಯಲ್ಲಿ ಎಸ್‌ಡಿಆರ್‌ಎಫ್ ತಂಡ ಮತ್ತು ಈಜುಗಾರರು ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಈ ಕುರಿತು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶೋಧ ಕಾರ್ಯ ಆರಂಭಿಸಲಾಗಿದೆ. ಸುಬ್ರಹ್ಮಣ್ಯ ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು ಕೂಡ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ.

Leave a Reply

Your email address will not be published. Required fields are marked *