Breaking
19 Sep 2026, Sat

ಬಿ.ಸಿ.ರೋಡಿನಲ್ಲಿ ರೈಲ್ವೇ ಹಳಿಗೆ ಬಿದ್ದು ಯುವಕ ಆತ್ಮಹತ್ಯೆ

ಬಂಟ್ವಾಳ: ಯುವಕನೋರ್ವ ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿ.ಸಿ. ರೋಡಿನ ರೈಲ್ವೇ ನಿಲ್ದಾಣದ ಬಳಿ ಇಂದು(ಜು.24) ಬೆಳಿಗ್ಗೆ ನಡೆದಿದೆ.

ಮೃತಪಟ್ಟ ಯುವಕ 35 ವರ್ಷವಿರಬಹುದು ಎಂದು ಅಂದಾಜಿಸಲಾಗಿದೆ.

ದೇಹದ ಕೆಳಗಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮುಖದ ಭಾಗಕ್ಕೆ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

ಮೃತ ಯುವಕನ ವಿವರಗಳು ಇನ್ನೂ ಪತ್ತೆಯಾಗಿಲ್ಲ ಎಂದು ರೈಲ್ವೇ ಇಲಾಖೆಯ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *