Breaking
19 Sep 2026, Sat

ಲಾರಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್‌ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಕುಂದಾಪುರ ತಾಲೂಕಿನ, ಕೆರಾಡಿ ಗ್ರಾಮದ ಚಪ್ಪರಕ ಕೋಣ್‌ಬೇರು ಎಂಬಲ್ಲಿ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.

ಬೈಕ್ ಸವಾರ ರೋಧಿ ಲಾಲ್ ಮೃತ ದುರ್ದೈವಿ.

ಕೆರಾಡಿ ಕಡೆಯಿಂದ ಕಾರಿಬೈಲು ಕಡೆಗೆ ಬರುತ್ತಿದ್ದ ಬೈಕ್ ಸವಾರ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಈ ಸಂದರ್ಭ ಲಾರಿಯ ಚಕ್ರ ಬೈಕ್ ಚಾಲಕ ರೋಧಿ ಲಾಲ್ ತಲೆಯ ಮೇಲೆ ಹರಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಈ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *