ಶಿರಾಡಿ ಘಾಟಿಯಲ್ಲಿ ಎರಡು ಬಸ್‌ ಗಳು ಪರಸ್ಪರ ಡಿಕ್ಕಿ: 25 ಮಂದಿಗೆ ಗಾಯ

ನೆಲ್ಯಾಡಿ: ಸಕಲೇಶಪುರ ತಾಲೂಕು ಶಿರಾಡಿ ಘಾಟಿಯ ಮಾರನಹಳ್ಳಿ ಬಳಿ ಎರಡು ಕೆಎಸ್‌ ಆರ್‌ ಟಿಸಿ ಬಸ್‌ ಗಳು ಪರಸ್ಪರ ಡಿಕ್ಕಿ ಹೊಡೆದು 25 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್‌ ಹಾಗೂ ಧರ್ಮಸ್ಥಳದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್‌ ನಡುವೆ ಅಪಘಾತ ಸಂಭವಿಸಿದ್ದು, 25 ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡವರಲ್ಲಿ 8 ಮಂದಿ ಪ್ರಯಾಣಿಕರಿಗೆ ಹಾಗೂ ಒಬ್ಬ ಬಸ್‌ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ನಂತರ ಗಾಯಾಳುಗಳನ್ನು ತಕ್ಷಣ ಸಕಲೇಶಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *