Breaking
19 Sep 2026, Sat

ಗಂಗೊಳ್ಳಿ: ಮುಳ್ಳಿಕಟ್ಟೆ, ರಿಕ್ಷಾ ನಿಲ್ದಾಣ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರೊಂದು ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಇಂದು(ಜು.25) ಬೆಳಿಗ್ಗೆ ಸಂಭವಿಸಿದೆ.

ಗಾಯಗೊಂಡಿರುವವರನ್ನು ತಾಜುದ್ದೀನ್ ಹಾಗೂ ಚಾಲಕನ ತಾಲ್ಕುಲ್ ಎಂದು ಗುರುತಿಸಲಾಗಿದೆ.

ಬೈಂದೂರು ಕಡೆಯಿಂದ ಬರುತ್ತಿದ್ದ ಕಾರು, ಹಠಾತ್ ಬ್ರೇಕ್ ಹಾಕಿದ ಪರಿಣಾಮ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆಯ ಬದಿಗೆ ಬಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ.

ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *