ಲಾರಿ ಹಾಗೂ ಕಾರಿನ ಮಧ್ಯೆ ಅಪಘಾತ: ಪ್ರಯಾಣಿಕರು ಸಾವು

ಅರಂತೋಡು: ಲಾರಿ ಹಾಗೂ ಕಾರಿನ ನಡುವೆ ಅಪಘಾತ ನಡೆದ ಘಟನೆ ಕೊಡಗಿನ ಸಂಪಾಜೆ ಗ್ರಾಮದ ಕೊಯನಾಡು ಸಮೀಪ ಇಂದು(ಜು.25) ನಡೆದಿದೆ.

ಮೃತಪಟ್ಟವರು ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಮಾರುಕಟ್ಟೆ ರಸ್ತೆಯ ನಿವಾಸಿಗಳಾದ ನಿಹಾದ್, ರಿಸ್ವಾನ್, ರಾಶಿಬ್ ಮತ್ತು ರಿಶು ಎಂದು ಗುರುತಿಸಲಾಗಿದೆ.

ಕಾರು ಉಳ್ಳಾಲದಿಂದ ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ತೆರಳುತ್ತಿದ್ದ ವೇಳೆ ಕೊಯನಾಡು ಬಳಿ ಈ ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *