ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ.ಟ್ರಸ್ಟ್ (ರಿ.)ವಿಟ್ಲ ಇದರ ಮುಡಿಪು ವಲಯದ‌ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ

ಮುಡಿಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ.ಟ್ರಸ್ಟ್ (ರಿ.)ವಿಟ್ಲ ಇದರ ಮುಡಿಪು ವಲಯದ‌ ವತಿಯಿಂದ ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಜರಗಿತು.

ಶಾಲಾ ಸಂಚಾಲಕರಾದ ಸುಬ್ರಹ್ಮಣ್ಯ ಭಟ್.ರವರು ಶಾಲಾ ಆವರಣದಲ್ಲಿ ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪರಿಸರ ಸಂರಕ್ಷಣೆ ನಮ್ಮ ಹೊಣೆ ಸಸಿಗಳನ್ನು ಮಗುವಿನಂತೆ ಸಾಕಿ ಬೆಳೆಸಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್, ಗ್ರಾಮಾಭಿವೃದ್ಧಿ ಯೋಜನೆಯ ವಲಯಾಧ್ಯಕ್ಷರಾದ ನವೀನ್ ಚಂದ್ರ, ನಿಕಟ ಪೂರ್ವ ಅಧ್ಯಕ್ಷರಾದ ಭಾಸ್ಕರ್, ಒಕ್ಕೂಟ ಅಧ್ಯಕ್ಷರಾದ ವಿನೋದ್, ಶಾಲಾ ಶಿಕ್ಷಕ ವೃಂದ, ಶೌರ್ಯವಿಪತ್ತು ನಿರ್ವಹಣಾ ಘಟಕದ ಅಧ್ಯಕ್ಷರಾದ ರವೀಂದ್ರ, ವಲಯ ಮೇಲ್ವಿಚಾರಕಿ ಪ್ರೇಮಲತ, ‌ವಿಪತ್ತು ಘಟಕದ ಸದಸ್ಯರು, ವಲಯದ ಸೇವಾ ಪ್ರತಿನಿಧಿಗಳು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *