Breaking
19 Sep 2026, Sat

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: 12 ನೇ ಆರೋಪಿ ಪೊಲೀಸ್ ವಶಕ್ಕೆ

ಬಂಟ್ವಾಳ: ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ 27ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧ‌ರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 12ನೇ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಪುದು ಗ್ರಾಮದ ರೊಟ್ಟಿಗುಡ್ಡೆ ನಿವಾಸಿ ಸಚಿನ್ ಯಾನೆ ಸಚ್ಚು ರೊಟ್ಟಿಗುಡ್ಡೆ (32) ಎಂದು ಗುರುತಿಸಲಾಗಿದೆ.

ಪ್ರಕರಣದಲ್ಲಿ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸರು 10 ಮಂದಿ ಆರೋಪಿಯನ್ನು ಬಂಧಿಸಿದ್ದು, ಜು. 21ರಂದು 11ನೇ ಆರೋಪಿ ಅಮ್ಮುಂಜೆ ಗ್ರಾಮದ ಶಾಹಿತ್ ಯಾನೆ ಸಾಹಿತ್‌ನನ್ನು ಬಂಧಿಸಿ ಕಸ್ಟಡಿಗೆ ಪಡೆದಿದ್ದಾರೆ.
ಪ್ರಾರಂಭದಲ್ಲಿ ಬಂಧಿತ ಬಹುತೇಕ ಎಲ್ಲ ಆರೋಪಿಗಳನ್ನು ಪೊಲೀಸರು ಕೆಲ ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದು, ಪ್ರಸ್ತುತ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

Leave a Reply

Your email address will not be published. Required fields are marked *