ಉಡುಪಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿನಿಧಿಸುತ್ತಿದ್ದ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದೆ. ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅ.24ರಂದು ಮತ ಎಣಿಕೆ ನಡೆಯಲಿದೆ, ಈ ಕುರಿತು ಚುನಾವಣಾ ಆಯೋಗವು ಆದೇಶ ಹೊರಡಿಸಿದೆ.ಕೋಟಾ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಅವರ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ಈ ಉಪಚುನಾವಣೆ ನಡೆಯಲಿದೆ.