Breaking
12 May 2026, Tue

ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಶಿಕ್ಷಕರ ಮತ್ತು ಪೋಷಕರ ಪಾತ್ರ ಕುರಿತು ಮಾಹಿತಿ ಕಾರ್ಯಾಗಾರ

ಬಂಟ್ವಾಳ: ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಶಿಕ್ಷಕರ ಮತ್ತು ಪೋಷಕರ ಪಾತ್ರ ಎಂಬ ವಿಷಯದ ಕುರಿತು ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗೆ ಹಾಗೂ ಪೋಷಕರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಈ ಕಾರ್ಯಾಗಾರದಲ್ಲಿ ಸರಕಾರಿ ಪದವಿ ಕಾಲೇಜು ಮುಡಿಪು ಅಸೋಸಿಯೇಟ್ ಪ್ರೊಫೆಸರ್ ಡಾ. ಶೇಷಪ್ಪ ಅಮೀನ್ ಕೆ. ಭಾಗವಹಿಸಿ ಈಗಿನ ಕಾಲದಲ್ಲಿ ಮಕ್ಕಳ ಜೊತೆ ಯಾವ ರೀತಿ ವ್ಯವಹರಿಸಬೇಕು ಎಂಬುದನ್ನು ಮನಮುಟ್ಟುವ ಶೈಲಿಯಲ್ಲಿ ವಿವರಿಸಿದರು.

ಈ ವೇಳೆ ಮುಡಿಪು ಪದವಿ ಕಾಲೇಜಿನ ಪ್ರಾಧ್ಯಾಪಕರಾದ, ಶ್ರೀ ಭಾರತೀ ಶಾಲೆಯ ಹಳೆ ವಿದ್ಯಾರ್ಥಿ ಶ್ರೀ ಹೈದರಾಲಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಶ್ರೀ ನಿಶ್ಚಲ್ ಜಿ. ಶೆಟ್ಟಿ, ಶಾಲಾ ಸಂಚಾಲಕರಾದ ಶ್ರೀ ಸುಬ್ರಹ್ಮಣ್ಯ ಭಟ್, ಕಾರ್ಯದರ್ಶಿ ಶ್ರೀ ರಾಮಕೃಷ್ಣ ಭಟ್, ಮುಖ್ಯೋಪಾಧ್ಯಾಯಿನಿ ಯರಾದ ಶ್ರೀಮತಿ ಶಕುಂತಲಾ ಶೆಟ್ಟಿ, ಶ್ರೀಮತಿ ಶ್ವೇತ ಬಲ್ಲಾಳ್ ಇವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ 2025-26 ನೇ ಸಾಲಿನ ಅಧ್ಯಕ್ಷರಾಗಿ ಶ್ರೀ ನಿಶ್ಚಲ್ ಜಿ ಶೆಟ್ಟಿ ಮತ್ತು ಉಪಾಧ್ಯಕ್ಷರಾಗಿ ಶ್ರೀ ಮಂಜುನಾಥ್ ಇವರನ್ನು ಆಯ್ಕೆ ಮಾಡಲಾಯಿತು.

Leave a Reply

Your email address will not be published. Required fields are marked *