ಬಂಟ್ವಾಳ : ಪುತ್ತೂರು ಕಾಂಚನ ವೆಂಕಟ ಸುಬ್ರಹ್ಮಣ್ಯೇಶ್ವರ ಪ್ರೌಢಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಜಂಪ್ ರೋಪ್ ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕಿನ ಕೊಯಿಲ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಭವಿಶ್ ಹಲಾಯಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸ್ಪರ್ದೆಗೆ ಆಯ್ಕೆಯಾಗಿದ್ದಾನೆ.
ಅಶೋಕ್ ಸಾಲ್ಯಾನ್ ಹಲಾಯಿ ಹಾಗೂ ತುಳಸಿ ದಂಪತಿಗಳ ಪುತ್ರನಾದ ಭವಿಶ್ ಕೊಯಿಲ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ.
ಕೊಯಿಲ ಪ್ರೌಢಶಾಲೆಯ ಮೋಹಿತ್ ರಾಜ್ ಹಾಗೂ ನಂದಕುಮಾರ್ ಇಬ್ಬರೂ ವಿದ್ಯಾರ್ಥಿಗಳೂ ಸೇರಿ ಮೂವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.