Breaking
14 Jul 2026, Tue

ಮಾಣಿಯಲ್ಲಿ ಕಾರು ಪಲ್ಟಿ: ಇಬ್ಬರಿಗೆ ಸಣ್ಣಪುಟ್ಟ ಗಾಯ

ಬಂಟ್ವಾಳ: ಮಾಣಿ ಸಮೀಪದ ಬೊಳ್ಳುಕಲ್ಲು ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಜುಲೈ 26 ರಂದು ಸಂಭವಿಸಿದೆ.

ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಕಾರು ಅಪಘಾತ ಸಂಭವಿಸಿದೆ. ಘಟನೆ ಪರಿಣಾಮ ಕಾರಿನಲ್ಲಿದ್ದ ಚಾಲಕ ಮತ್ತು ಓರ್ವ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದುಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಹೆದ್ದಾರಿಯಲ್ಲಿ ಮಳೆ ನೀರು ನಿಂತಿರುವ ಕಾರಣ ಈ ಅಪಘಾತಗಳು ಸಂಭವಿಸಿದೆ ಎಂದು ವಾಹನ ಚಾಲಕ ಹೇಳಿದ್ದಾರೆ.

Leave a Reply

Your email address will not be published. Required fields are marked *