Breaking
19 Sep 2026, Sat

ಮಣಿಪಾಲ: ಕರ್ತವ್ಯ ನಿರತ ಮಹಿಳಾ ಪೊಲೀಸ್ ಮೇಲೆ ಹಲ್ಲೆಗೆ ಯತ್ನ : ವ್ಯಕ್ತಿ ಬಂಧನ

ಮಣಿಪಾಲ: ರಾತ್ರಿ ರೌಂಡ್ಸ್ ನಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಯತ್ನಿಸಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಉಡುಪಿಯ ಕೊಡವೂರು ಗ್ರಾಮದ ಜುಮಾದಿನಗರದ ಸಾಗರ್ (25) ಎಂದು ಗುರುತಿಸಲಾಗಿದೆ.

ಜು.26ರಂದು ಅನುಮಾನಸ್ಪದವಾಗಿ ಓಡಾಡುತ್ತಿದ್ದ ಸಾಗರ್ ನನ್ನು ಮಹಿಳಾ ಪೊಲೀಸ್ ಅಧಿಕಾರಿ ವಿಚಾರಣೆ ನಡೆಸಿದಾಗ ಈ ಘಟನೆ ನಡೆದಿದೆ.

ಬಂಧಿತನನ್ನು ಜು.26ರಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *