ಉಡುಪಿ: ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕೆಳಾರ್ಕಳ ಬೆಟ್ಟಿನ ನಿವಾಸಿ ಸ್ವಸ್ತಿಕ್ (16) ಎಂದು ಗುರುತಿಸಲಾಗಿದೆ. ಈತ ಉಡುಪಿಯ ಕಾಲೇಜ್ ವೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು ಭಾನುವಾರ ಮನೆಯ ಹಾಲ್ ನ ಕಿಟಕಿಗೆ ನೇಣು ಹಾಕಿಕೊಂಡು ಸೋಫಾದ ಮೇಲೆ ಒರಗಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಕೂಡಲೆ ಸ್ವಸ್ತಿಕ್ನ ತಾಯಿ ನೆರೆಮನೆಯವರಿಗೆ ಈ ವಿಚಾರ ತಿಳಿಸಿದ್ದು ಕುತ್ತಿಗೆಯಲ್ಲಿದ್ದ ಬೆಲ್ಟ್ ಅನ್ನು ಕಟ್ ಮಾಡಿ ಕಾರಿನಲ್ಲಿ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.
ಅಲ್ಲಿನ ವೈದ್ಯರ ಸಲಹೆ ಮೇರೆಗೆ ಉಡುಪಿಯ ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ವಿದ್ಯಾರ್ಥಿ ಮೃತ ಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


