Breaking
19 Sep 2026, Sat

ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ: ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಯಲ್ಲಿ ಸಾವು

ಸುಳ್ಯ: ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮೃತಪಟ್ಟಿರುವ ಘಟನೆ ಸುಳ್ಯ ತಾಲೂಕಿನ ಕಲ್ಲಗುಂಡಿ ಅಂಚೆ ಕಚೇರಿ ಬಳಿ ಜು.27 ರಂದು ನಡೆದಿದೆ.

ಮೃತರನ್ನು ಇಲ್ಲಿನ ಬೈಲು ನಿವಾಸಿಯಾಗಿರುವ ಕಮಲಾ ಚೆತ್ಕಾರ್(67) ಎಂದು ಗುರುತಿಸಲಾಗಿದೆ.

ಕಮಲಾ ಅವರು ಸಂಪಾಜೆಗೆ ಹೋಗುವ ಬಸ್ ಹತ್ತುವುದಕ್ಕಾಗಿ ಕಲ್ಲಗುಂಡಿ ಅಂಚೆ ಕಚೇರಿ ಬಳಿ ರಸ್ತೆ ದಾಟುತ್ತಿದ್ದಾಗ, ಸುಳ್ಯದ ಕಡೆಗೆ ಬರುತ್ತಿದ್ದ ಕೇರಳ ನೋಂದಣಿಯ ಬೈಕ್ ನಿಯಂತ್ರಣ ಕಳೆದುಕೊಂಡು ಅವರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *