Breaking
19 Sep 2026, Sat

ಧರ್ಮಸ್ಥಳದ ಅಸಹಜ ಸಾವಿನ ಪ್ರಕರಣ: ದೂರುದಾರನನ್ನು ನೇತ್ರಾವತಿ ಘಟಕ್ಕೆ ಕರೆದುಕೊಂಡು ಬಂದ ಎಸ್ಐಟಿ ಅಧಿಕಾರಿಗಳು

ಧರ್ಮಸ್ಥಳ: ಗ್ರಾಮದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ ಪ್ರಕರಣದ ತನಿಖೆ ಇದೀಗ ತೀವ್ರಗೊಂಡಿದೆ.

ಇದೀಗ ಪ್ರಕರಣದ ಮುಂದುವರಿದ ಭಾಗವಾಗಿ ಎಸ್ಐಟಿ ಅಧಿಕಾರಿಗಳು ದೂರುದಾರನನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಸಮೀಪ ತೆಂಗಿನ ತೋಟದ ಪೊದೆಯ ಹತ್ತಿರ ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸುತ್ತಿದ್ದಾರೆ.

ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಾಟು ಮಾಡಲಾಗಿದ್ದು. ಕಂದಾಯ ಇಲಾಖೆ, ಸರ್ವೆ ಇಲಾಖೆ, ಐ.ಎಸ್.ಡಿ ಎಫ್.ಎಸ್.ಲ್ ವಿಭಾಗದ ಸೋಕೋ ಸಿಬ್ಬಂದಿ ,ಅರಣ್ಯ ಇಲಾಖೆ ತಂಡ ಸ್ಥಳದಲ್ಲಿ ಬೀಡು ಬಿಟ್ಟಿದೆ.

Leave a Reply

Your email address will not be published. Required fields are marked *