ಬಂಟ್ವಾಳ: ಸಿದ್ದಕಟ್ಟೆಯಲ್ಲಿ ಬಂಟ್ವಾಳ ಹೋಬಳಿ ರೈತ ಸಂಪರ್ಕ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನ ಕಾರ್ಯಕ್ರಮ ವು ಇಂದು ನೆರವೇರಿತು.
ಸಿದ್ದಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಹತ್ತಿರ ಇರುವ ಕೃಷಿ ಇಲಾಖೆಗೆ ಸೇರಿರುವ ಜಾಗದಲ್ಲಿ ಬಂಟ್ವಾಳ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ನಿರ್ಮಾಣದ ಅಡಿಗಲ್ಲು ಹಾಕಲಾಯಿತು.ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸನ್ಮಾನ್ಯ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಯವರು ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿದರು, ನಂತರ ಅರ್ಹ ಫಲಾನುಭವಿಗಳಿಗೆ ಕೃಷಿ ಯಂತ್ರೋಪಕರಣ ವಿತರಿಸಿದರು.
ಈ ಸಂಧರ್ಭದಲ್ಲಿ ಸಿದ್ದಕಟ್ಟೆ ಹಾಲು ಉತ್ಪಾದಕರ ಸಂಘ ದ ಅಧ್ಯಕ್ಷ ರತ್ನಕುಮಾರ್ ಚೌಟ, ಸಿದ್ದಕಟ್ಟೆ ಸಿ ಎ ಬ್ಯಾಂಕ್ ಅಧ್ಯಕ್ಷ ಪ್ರಭಾಕರ್ ಪ್ರಭು, ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಾಜೀವಿ ಪೂಜಾರಿ,ಕುಕ್ಕಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಶೆಟ್ಟಿ ಬದ್ಯಾರು ಪ್ರಮುಖರಾದ ಸಂದೇಶ್ ಶೆಟ್ಟಿ ಪೊಡುoಬ, ಸತೀಶ್ ಪೂಜಾರಿ ಅಳಕ್ಕೆ, ದೇವರಾಜ್ ಸಾಲ್ಯಾನ್,ರಶ್ಮಿತ್ ಶೆಟ್ಟಿ ಕೈತ್ರೋಡಿ,ಸುನಿಲ್ ಶೆಟ್ಟಿಗಾರ್ ಸಿದ್ದಕಟ್ಟೆ , ಉದಯ್ ಪೂಜಾರಿ, ಸಂಗಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಸುರೇಶ್ ಕುಲಾಲ್ ಹಾಗೂ ಮತ್ತಿತರರು ಉಸ್ಥಿತರಿದ್ದರು.