ತಿರುಪತಿ: ತಿರುಪತಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡುತ್ತಿದ್ದ ಲಡ್ದುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇರುವುದನ್ನು ಲ್ಯಾಬ್ ವರದಿಯು ದೃಢಪಡಿಸಿದೆ.ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ಸರಕಾರ ತಿರುಪತಿ ಲಡ್ದು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಗುಣಮಟ್ಟವಿಲ್ಲದ ಪದಾರ್ಥಗಳನ್ನು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆರೋಪಿಸಿದ ಬೆನ್ನಲ್ಲೇ ಲ್ಯಾಬ್ ವರದಿ ದೃಢಪಟ್ಟಿದೆ.
ಇದೀಗ, ಪಶು ಆಹಾರ ಮತ್ತು ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಪರೀಕ್ಷಿಸುವ ಖಾಸಗಿ ಪ್ರಯೋಗಾಲಯದ NDDB CALF ನ ವರದಿಯು ತಿರುಪತಿ ಲಡ್ದುಗಳನ್ನು ತಯಾರಿಸಲು ಬಳಸುವ ತುಪ್ಪದ ಮಾದರಿಗಳಲ್ಲಿ ತಾಳೆ ಎಣ್ಣೆ, ಮೀನಿನ ಎಣ್ಣೆ, ಬೀಫ್ ಟ್ಯಾಲೋ, ಹಂದಿಯ ಕೊಬ್ಬಿನ ಅಂಶ ಸೇರಿರುವುದನ್ನು ಬಹಿರಂಗಪಡಿಸಿದೆ.
ಚಂದ್ರಬಾಬು ನಾಯ್ಡು ಅವರ ಗಂಭೀರ ಆರೋಪದ ನಂತರ, ಆಂಧ್ರಪ್ರದೇಶದ ಐಟಿ ಸಚಿವ ನಾರಾ ಲೋಕೇಶ್ ಕೂಡ ಈ ವಿಷಯದ ಬಗ್ಗೆ ಜಗನ್ ಮೋಹನ್ ರೆಡ್ಡಿ ಅವರನ್ನು ಗುರಿಯಾಗಿಸಿದ್ದಾರೆ.ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬುದು ಗಂಭೀರ ವಿಷಯವಾಗಿದ್ದು ಭಾಗಿಯಾಗಿರುವವರ ವಿರುದ್ಧ ಕಠಿನ ಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಒತ್ತಾಯಿಸಿದೆ.