ಉಡುಪಿ: ಕಾರು ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಜು.27 ಬನ್ನಂಜೆಯ ಎಸ್‌ಪಿ ಕಚೇರಿ ಸಮೀಪ ನಡೆದಿದೆ.
ಗಾಯಗೊಂಡವರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ಶಿವಕೃಷ್ಣ ಎಂದು ಗುರುತಿಸಲಾಗಿದೆ.

ಬನ್ನಂಜೆಯ ಎಸ್‌ಪಿ ಕಚೇರಿ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ತಕ್ಷಣವೇ ಶಿವಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.



