Breaking
19 Sep 2026, Sat

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಗೆ ಗುಡ್ಡ ಕುಸಿತ

ಕಾರವಾರ: ಕಳೆದ ಎರಡು ದಿನಗಳಿಂದ ನಿರಂತರವಾಗಿ ಭಾರಿ ಮಳೆಯಾಗುತ್ತಿರುವ ಪರಿಣಾಮ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕತಗಾಲ ಗ್ರಾಮದ ಬಳಿಯ ದೇವಿಮನೆ ಘಟ್ಟ ಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದಿರುವ ಘಟನೆ ನಡೆದಿದೆ.

ಗುಡ್ಡ ಕುಸಿದ ಪರಿಣಾಮ ಭಾರೀ ಪ್ರಮಾಣದ ಮಣ್ಣು, ಕಲ್ಲು ಬಂಡೆಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ವಾಹನಗಳಿಗೆ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಿ ಕೊಡಲಾಗಿದೆ.

ಇನ್ನೂ ಮಳೆಯ ತೀವ್ರತೆ ಹೆಚ್ಚಾಗಿದ್ದರಿಂದ ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿಯಲ್ಲೂ ಭೂಕುಸಿತವಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

Leave a Reply

Your email address will not be published. Required fields are marked *