Breaking
21 Jun 2026, Sun

ಮಂಗಳೂರು: ಗಾಂಜಾ ಸೇವನೆ: ಯುವಕ ಪೊಲೀಸ್ ವಶಕ್ಕೆ

ಮಂಗಳೂರು: ಪಂಪ್‌ವೆಲ್ ಬಳಿ ಅಮಲು ಪದಾರ್ಥ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಕಂಕನಾಡಿ ಜಪ್ಪಿನಮೊಗರು ನಿವಾಸಿ ಮಹೇಶ್ ಸಾಲಿಯಾನ್ (35) ಎಂದು ಗುರುತಿಸಲಾಗಿದೆ.

ವ್ಯಕ್ತಿಯೊಬ್ಬರು ರಿಕ್ಷಾ ನಿಲ್ಲಿಸಿ ಸಾರ್ವಜನಿಕರಿಗೆ ಬಯ್ಯುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆಗೆ ಒಳಪಡಿಸಿದಾಗ ಮಹೇಶ್ ಸಾಲಿಯಾನ್ ಗಾಂಜಾ ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ವೈದ್ಯಕೀಯ ತಪಾಸಣೆಯಲ್ಲಿ ಮಾದಕವಸ್ತು ಸೇವನೆ ದೃಢಪಟ್ಟಿದ್ದು, ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *