Breaking
21 Jun 2026, Sun

ಬೈಕ್ ಗೆ ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಗಂಭೀರ ಗಾಯ

ವಿಟ್ಲ : ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಚಂದಳಿಕೆಯಲ್ಲಿ ನಡೆದಿದೆ.
ಗಾಯಾಳುವನ್ನು ಪೆರುವಾಯಿ ನಿವಾಸಿ ಅರ್ಚಕ ಹರ್ಷ ಭಟ್ ಎಂದು ಗುರುತಿಸಲಾಗಿದೆ.

ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಮಿತಿ ಮೀರಿದ ವೇಗದಲ್ಲಿ ಓವರ್ ಟೇಕ್ ಮಾಡುವ ಭರದಲ್ಲಿ ಚಲಿಸುತ್ತಿದ್ದ ಪುತ್ತೂರು ಕಡೆಯಿಂದ ಬಂದ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಗಾಯಾಳುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *