Breaking
20 Jun 2026, Sat

ಧರ್ಮಸ್ಥಳ ಪರಿಸರದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಪ್ರಕರಣ – ಎಸ್‌ಐಟಿ ತಂಡಕ್ಕೆ ಮತ್ತಷ್ಟು ಅಧಿಕಾರಿಗಳು ನೇಮಕ

ಬೆಳ್ತಂಗಡಿ: ಧರ್ಮಸ್ಥಳ ಪರಿಸರದಲ್ಲಿ ಹಲವು ಮೃತದೇಹಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ)ಮತ್ತಷ್ಟು ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಎಸ್.ಐ.ಟಿಯ ಮೂವರು ಉನ್ನತ ಅಧಿಕಾರಿಗಳನ್ನು ನೇಮಕ ಮಾಡಿದ ಬಳಿಕ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು. ಇದೀಗ ಮತ್ತೆ 9 ಮಂದಿ ಪೊಲೀಸರನ್ನು ನೇಮಕಗೊಳಿಸಿ ಆದೇಶ ಮಾಡಲಾಗಿದೆ.

ಉಪ್ಪಿನಂಗಡಿ ಪೊಲೀಸ್‌ ಠಾಣೆಯ ಪಿಎಸ್‌ಐ ಲಾರೆನ್ಸ್, ಸೆನ್ ಪೊಲೀಸ್ ಠಾಣೆಯ ಹೆಚ್.ಸಿ ಪುನೀತ್, ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೆಚ್.ಸಿ ಮನೋಹರ, ವಿಟ್ಲ ಪೊಲೀಸ್ ಠಾಣೆಯ ಪಿ.ಸಿ ಮನೋಜ್, ಪುಂಜಾಲಕಟ್ಟೆ ಪೊಲೀಸ್‌ ಠಾಣೆಯ ಪಿ.ಸಿ ಸಂದೀಪ, ಉಡುಪಿ ಸಿ.ಎಸ್.ಪಿ ಪೊಲೀಸ್‌ ಠಾಣೆಯ ಪಿ.ಸಿ ಲೋಕೇಶ್, ಹೊನ್ನಾವರ ಪೊಲೀಸ್‌ ಠಾಣೆಯ ಹೆಚ್.ಸಿ ಸತೀಶ್ ನಾಯ್ಕ,ಮಂಗಳೂರು ಎಫ್.ಎಮ್.ಎಸ್ ದಳದ ಹೆಚ್.ಸಿ ಜಯರಾಮೇಗೌಡ ಮತ್ತು ಹೆಚ್.ಸಿ ಬಾಲಕೃಷ್ಣ ಗೌಡ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಎಸ್‌.ಐ.ಟಿ ಸಂಸ್ಥೆಗೆ ವರದಿ ಮಾಡಿಕೊಳ್ಳಲು ಡಿಜಿ&ಐಜಿಪಿ ಡಾ.ಎಂ.ಎ ಸಲೀಂ ಜುಲೈ 30 ರಂದು ಅದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *