Breaking
23 Mar 2026, Mon

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ: ಓವ೯ ಆರೋಪಿ ಪೊಲೀಸ್ ವಶಕ್ಕೆ

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ಮಾಡಲು ಬಳಕೆ ಮಾಡಿದ್ದ ವಾಹನ ಮತ್ತು ಓವ೯ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜು. 29ರಂದು ಪೊಲೀಸ್ ಉಪನಿರೀಕ್ಷಕ ಶಿವಕುಮಾ‌ರ್ ಅವರು ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಆಡಂಕುದ್ರುವಿನ ಚಾಪೆಲ್ ಚರ್ಚ್ ರಸ್ತೆಯಲ್ಲಿ ಬೆಳಗ್ಗೆ 6.30ಕ್ಕೆ ಬರುತ್ತಿದ್ದ ಪಿಕಪ್‌ನ ಚಾಲಕನು ಪೊಲೀಸರನ್ನು ಕಂಡು ವಾಹನವನ್ನು ನಿಲ್ಲಿಸಿ ಕೆಳಗೆ ಇಳಿದು ಓಡಿ ಹೋಗಿದ್ದಾನೆ. ಅದರ ಹತ್ತಿರದಲ್ಲಿ ಬರುತ್ತಿದ್ದ ಸ್ಕೂಟರ್‌ನ ಸವಾರ ನೌಷದ್ ಆಲಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆತ ತಾನು ಸುನೀಲ್ ಡಿ’ಸೋಜಾನೊಂದಿಗೆ ಸೇರಿ ಆಡಂಕುದ್ರುವಿನಲ್ಲಿ ನೇತ್ರಾವತಿ ನದಿಯ ತೀರದಿಂದ ಮರಳು ತುಂಬಿಸಿಕೊಂಡು ಹೋಗುತ್ತಿದ್ದು ಪಿಕಪ್ ವಾಹನಕ್ಕೆ ಸ್ಕೂಟರ್‌ನ್ನು ಬೆಂಗವಲಾಗಿ ಬಳಕೆ ಮಾಡುತ್ತಿರುವುದಾಗಿ ತಿಳಿಸಿದ್ದಾನೆ.

ಆರೋಪಿಗಳು ಪರವಾನಿಗೆ ಪಡೆಯದೇ ಮರಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿರುವುದು ಖಚಿತವಾಗಿದ್ದು,ಓವ೯ ಆರೋಪಿ ಹಾಗೂ ಪಿಕಪ್ ವಾಹನ ಸಹಿತ ಮರಳು ಮತ್ತು ಸ್ಕೂಟರ್‌ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನೋವ೯ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

Your email address will not be published. Required fields are marked *