ಕಾಸರಗೋಡು: ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊರ್ವನನ್ನು ಅಬಕಾರಿ ದಳದ ಸಿಬ್ಬಂದಿಗಳು ವಶಕ್ಕೆ ಪಡೆದ ಘಟನೆ ಕುಂಬಳೆ ಶಿರಿಯ ಎಂಬಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂದ್ಯೋಡಿನ ಮುಹಮ್ಮದ್ ಅಲಿ (51) ಎಂಬವನನ್ನು ಬಂಧಿಸಲಾಗಿದೆ.

ಜು.29ರಂದು ರಾತ್ರಿ ಕುಂಬಳೆ ಶಿರಿಯದಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಮುಹಮ್ಮದ್ ಅಲಿ ಸಿಕ್ಕಿಬಿದ್ದಿದ್ದಾನೆ.
ಈ ವೇಳೆ ಈತನಿಂದ ಸುಮಾರು 1.800 ಕಿಲೋ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



