ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ ) ವಿಟ್ಲ , ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ದೇರಳಕಟ್ಟೆ ಯೇನೆಪೋಯ ಮೆಡಿಕಲ್ ಕಾಲೇಜು,
ಪ್ರಗತಿ ಬಂಧು -ಸ್ವಸಹಾಯ ಸಂಘಗಳ ಒಕ್ಕೂಟ ಕೇಪು ವಲಯ,
ಶ್ರೀ ಚಾಮುಂಡೇಶ್ವರಿ ದೇವಿ ಸೇವಾ ಟ್ರಸ್ಟ್( ರಿ ) ಕಣಿಯೂರು,
ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ
ಉಚಿತ ಆರೋಗ್ಯ ತಪಾಸಣಾ ಶಿಬಿರವು ಕನ್ಯಾನ ಶ್ರೀ ಗುರುದೇವ ಕಲ್ಯಾಣ ಮಂಟಪ ಕನ್ಯಾನದಲ್ಲಿ ಶುಕ್ರವಾರ ನಡೆಯಿತು.
ಶಿಬಿರವನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿ,
ಸಮಾಜದಲ್ಲಿ ಜನರಿಗೆ ಆರೋಗ್ಯದ ಬಗ್ಗೆ ಅರಿವು ಪ್ರಸ್ತುತ ಸನ್ನಿವೇಶದಲ್ಲಿ ಅತ್ಯಂತ ಅವಶ್ಯಕವಾಗಿದೆ. ಇಂತಹ ಉಚಿತ ಆರೋಗ್ಯ ಮಾಹಿತಿಗಳು ಗ್ರಾಮ ಮಟ್ಟದಲ್ಲಿ ನಡೆಯುವುದು ಜನರಿಗೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಮಾತನಾಡಿ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಇಂತಹ ಹತ್ತು ಹಲವು ಸಾಮಾಜಿಕ ಚಟುವಟಿಕೆಗಳು ನಡೆಯುತ್ತಿದೆ. ಪೂಜ್ಯರು ಬಡ ಜನರ ಏಳಿಗೆಗೆ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಶ್ರೀ ಚಾಮುಂಡೇಶ್ವರಿ ದೇವಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಪದ್ಮನಾಭ ಪೂಜಾರಿಯವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮೂಲಕ ಇಂತಹ ಹಲವು ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಇದರ ಪ್ರಯೋಜನ ನಾವೆಲ್ಲರೂ ಪಡೆಯೋಣ ಎಂದು ತಿಳಿಸಿದರು.
ವೇದಿಕೆಯಲ್ಲಿ ಯೇನೆಪೋಯ ಆಸ್ಪತ್ರೆಯ ವೈದ್ಯರಾದ ಡಾ.ಸ್ನೇಹ ಶೆಟ್ಟಿ, ದೇಲಂತಬೆಟ್ಟು ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಮನೋಜ್ ಕುಮಾರ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಘುರಾಮ ಶೆಟ್ಟಿ, ಕೇಪು ವಲಯದ ಮಾಜಿ ವಲಯಾಧ್ಯಕ್ಷ ಜಯಾನಂದ ಕಣಿಯೂರು, ಒಕ್ಕೂಟದ ಅಧ್ಯಕ್ಷರುಗಳಾದ ಪೂವಪ್ಪ ಗೌಡ ಶಿರಂಕಲ್ಲು, ಕೃಷ್ಣ ನಾಯ್ಕ್, ಶ್ರೀಮತಿ ದರ್ನಮ್ಮ, ಶ್ರೀಮತಿ ಸುಜಾತ, ಉಪಸ್ಥಿತರಿದ್ದರು.
ಕೇಪು ವಲಯ ಮೇಲ್ವಿಚಾರಕ ಜಗದೀಶ್ ಸ್ವಾಗತಿಸಿದರು. ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರೀಮತಿ ವಿಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು. ಜ್ಞಾನದೀಪ ಶಿಕ್ಷಕಿ ಶ್ರೀಮತಿ ರೇಣುಕಾ ಕಣಿಯೂರು ವಂದಿಸಿದರು.
ಶಿಬಿರದಲ್ಲಿ 300 ಸದಸ್ಯರು ಭಾಗವಹಿಸಿ ಶಿಬಿರದ ಸದುಪಯೋಗ ಪಡೆದು ಕೊಂಡರು.