Breaking
19 Sep 2026, Sat

ದನ ಕಳ್ಳತನ ಪಿಕಪ್‌ ವಾಹನ ಸಹಿತ ಇಬ್ಬರು ಪೊಲೀಸ್‌ ವಶಕ್ಕೆ

ಉಡುಪಿ : ಆತ್ರಾಡಿ ಗ್ರಾಮದ ಪರೀಕದಲ್ಲಿ ದನ ಕಳ್ಳತನದಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಬಂಧಿಸಿದ ಘಟನೆಯು ಇಂದು ನಡೆದಿದೆ. ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ, ಜಾನುವಾರು, ಪಿಕಪ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ವ್ಯಕ್ತಿಗಳನ್ನು ಕಾಪು ತಾಲೂಕಿನ ಮೂಡುಬೆಟ್ಟು ಗ್ರಾಮದ ಮೆಹಬೂಬ್ ಸಾಹೇಬ್ (65) ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಪದ್ಮನಾಭ (57) ಎಂದು ಗುರುತಿಸಲಾಗಿದೆ.

ಪೊಲೀಸರು KA 07 5094 ನೋಂದಣಿ ಸಂಖ್ಯೆಯನ್ನು ಹೊಂದಿರುವ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದು, ಇದರ ಮೌಲ್ಯ ಸುಮಾರು 6 ಲಕ್ಷ ರೂ.. ಇದರ ಜೊತೆಗೆ, ಸುಮಾರು 6,000 ರೂ. ಮೌಲ್ಯದ ಒಂದು ಹಸು ಮತ್ತು ಒಂದು ಕರುವನ್ನು ಸಹ ವಶಕ್ಕೆ ಪಡೆಯಲಾಗಿದೆ.ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

Leave a Reply

Your email address will not be published. Required fields are marked *