Breaking
21 Jun 2026, Sun

ಮಂಗಳೂರು: ಮಹಿಳಾ ಆಶ್ರಯ ಕೇಂದ್ರದಲ್ಲಿದ್ದ ಯುವತಿ ಪರಾರಿ

ಮಂಗಳೂರು: ಮಹಿಳಾ ಆಶ್ರಯ ಕೇಂದ್ರದಲ್ಲಿ ದಾಖಲಾಗಿದ್ದ ಒಡಿಶಾ ಮೂಲದ ಯುವತಿಯೋರ್ವರು ಪರಾರಿಯಾಗಿದ್ದಾರೆ.

ಪರಾರಿಯಾದ ಯುವತಿಯನ್ನು ಒಡಿಷಾ ಮೂಲದ ತ್ರಿಶಾ (22) ಎಂದು ಗುರುತಿಸಲಾಗಿದೆ.

ಕಳೆದ ವರ್ಷ ತ್ರಿಶಾ ಉದ್ಯೋಗದ ಹುಡುಕಾಟದಲ್ಲಿ ಮಂಗಳೂರಿಗೆ ಬಂದಿದ್ದರು ಎನ್ನಲಾಗಿದ್ದು, ಬಳಿಕ ಇತ್ತೀಚೆಗೆ ಮುಡಿಪುವಿನ ಪ್ರಜ್ಞಾ ಸ್ವಾಧಾರ ಕೇಂದ್ರದಲ್ಲಿ ವಾಸವಾಗಿದ್ದರು. ಇವರು ಜು.30 ರಂದು ರಾತ್ರಿ ಅಡುಗೆ ಕೋಣೆಯ ಬಾಗಿಲು ತೆರೆದು ಆಶ್ರಯ ಕೇಂದ್ರದ ಕೌಂಪೌಂಡ್ ಹಾರಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಇವರು ಸುಮಾರು 4 ಅಡಿ ಎತ್ತರ, ಧೃಡ ಶರೀರ, ಕಪ್ಪು ಮೈ ಬಣ್ಣ ಹೊಂದಿದ್ದು, ಹಿಂದಿ ಹಾಗೂ ಒಡಿಸ್ಸಾ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಣಾಜೆ ಪೊಲೀಸ್ ಠಾಣೆ(0824-2220536) ಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *