ಬಂಟ್ವಾಳ: ಗಾಣಿಗರ ಸೇವಾ ಸಂಘದ ವತಿಯಿಂದ ಪಾಣೆಮಂಗಳೂರು ಸುಮಂಗಲಾ ಸಭಾಂಗಣದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮವು ಆ.3ರಂದು ಬೆಳಿಗ್ಗೆ ಗಂಟೆ 9.30ಕ್ಕೆ ನಡೆಯಲಿದೆ.

ಸಂಘದ ಅಧ್ಯಕ್ಷ ಕೃಷ್ಣಪ್ಪ ಗಾಣಿಗ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದು, ಶಾಸಕ ರಾಜೇಶ ನಾಯ್ಕ್ ಉಳಿಪಾಡಿ ಇವರು ವಿದ್ಯಾರ್ಥಿ ಪ್ರೋತ್ಸಾಹಧನ ವಿತರಿಸುವರು. ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರನ್ನು ಮಾಜಿ ಸಚಿವ ಬಿ.ರಮಾನಾಥ ರೈ ಸನ್ಮಾನಿಸಲಿದ್ದು, ನಿಟ್ಟೆ ತಾಂತ್ರಿಕ ಶಿಕ್ಷಣ ವಿಭಾಗ ಮುಖ್ಯಸ್ಥ ಡಾ.ದುರ್ಗಾಪ್ರಸಾದ್ ನಿಟ್ಟೆ ಉಪನ್ಯಾಸ ನೀಡುವರು ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದೆ.



