ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಮಸೂದ್ ಎಂ ಕೆ, ಮೊಹಮ್ಮದ್ ಆಶಿಕ್ ಮತ್ತು ಸುಬೇರ್ ಎಂದು ಗುರುತಿಸಲಾಗಿದೆ.

ಮೂಡಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್ ನ ಮಠದಕೆರೆ ಎಂಬ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳಿಂದ 123 ಕೆಜಿ ಗಾಂಜಾ, ಎರಡು ವಾಹನಗಳು ಮತ್ತು 5 ಮೊಬೈಲ್ ಫೋನ್ ಸೇರಿದಂತೆ ಒಟ್ಟು 46, 20,000 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




