ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸಹಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಪಿಲಾತಬೆಟ್ಟು ನಿವಾಸಿ ಜನಾರ್ಧನ ಮೂಲ್ಯ (51) ಎಂದು ಗುರುತಿಸಲಾಗಿದೆ.

ಶಿವರಾಜ್ ಎಂಬವರ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಪುಂಜಾಲಕಟ್ಟೆ ಆಸ್ಪತ್ರೆಯ ಮುಂಭಾಗದಲ್ಲಿ ಅಪಘಾತ ನಡೆದಿದೆ. ಸತೀಶ್ ಎಂಬವರ ಬೈಕ್ ಹಾಗೂ ಶಿವರಾಜ್ ಎಂಬವರ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು ಇವರಿಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಪುಂಜಾಲಕಟ್ಟೆ ಎಸ್. ಐ.ರಾಜೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.




