Breaking
23 Mar 2026, Mon

ವಿಟ್ಲ ಠಾಣಾ ಪೊಲೀಸರಿಂದ ಅಕ್ರಮ ಮರಳು ಅಡ್ಡೆಗೆ ದಾಳಿ

ಬಂಟ್ವಾಳ: ಅಕ್ರಮ ಮರಳು ಅಡ್ಡೆಗೆ ವಿಟ್ಲ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ.

ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಎಂಬಲ್ಲಿ ಆರೋಪಿ ಅಬ್ದುಲ್ ಸಮದ್ ಎಂಬಾತ ಹೊಳೆಯಿಂದ ಯಂತ್ರದ ಮೂಲಕ ಮರಳನ್ನು ಅಕ್ರಮವಾಗಿ ತೆಗೆದು ಸಂಗ್ರಹಿಸಿಟ್ಟಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತ್ತಿದ್ದು, ಈ ಹಿನ್ನೆಲೆ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರತ್ನಕುಮಾರ್ ರವರು ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿದ್ದಾರೆ.

ಈ ವೇಳೆ ಹೊಳೆಯ ಸೇತುವೆ ಬಳಿ, ಸುಮಾರು 2 ರಿಂದ 3 ಪಿಕಪ್ ನಷ್ಟು ಮರಳು, ಹೊಳೆಯಿಂದ ಮರಳನ್ನು ತೆಗೆಯಲು ಉಪಯೋಗಿಸುತ್ತಿದ್ದ ಯಂತ್ರ, ಕಬ್ಬಿಣದ ಜಾಲರಿ, ಪೈಬರ್ ಬುಟ್ಟಿಗಳು, ಕಬ್ಬಿಣದ ಹಾರೆ ಹಾಗೂ ಕೃತ್ಯಕ್ಕೆ ಬಳಸಿದ ಇತರೆ ಸೊತ್ತುಗಳು ಕಂಡುಬಂದಿದೆ.
ಈ ಎಲ್ಲಾ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *