Breaking
19 Sep 2026, Sat

ಮಣಿಪಾಲದಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಚಾಲಕ ಸ್ಥಳದಿಂದ ಪರಾರಿ

ಮಣಿಪಾಲ: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಣಿಪಾಲ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಆ.4ರ ಬೆಳಗ್ಗೆ ನಡೆದಿದೆ.

ಬೆಂಗಳೂರು ನೋಂದಣಿಯ ಕಾರು ಇದಾಗಿದ್ದು. ಕಾರಿನಲ್ಲಿ ಚಾಲಕ ಮಾತ್ರ ಇದ್ದ ಅಂತ ಹೇಳಲಾಗುತ್ತಿದೆ. ಅಪಘಾತ ನಡೆದ ಕೂಡಲೇ ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂತಿಗಳು ರಸ್ತೆಗೆ ಬಿದ್ದಿದ್ದು ,ಕಾರಿಗೆ ಮುಂಭಾಗಕ್ಕೆ ಹಾನಿ ಉಂಟಾಗಿದೆ. ಚಾಲಕನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರುವ ಸಾಧ್ಯತೆ ಇದೆ ಅಂತ ಹೇಳಲಾಗುತ್ತಿದೆ.

ಘಟನೆ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *