ಬಂಟ್ವಾಳ: ಧಾರ್ಮಿಕ ಕೇಂದ್ರದ ಕಾಣಿಕೆ ಹುಂಡಿಯನ್ನು ಒಡೆದು ಹಣ ದೋಚಿದ ಆರೋಪದಡಿ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ವಿಟ್ಲ ಕಸಬಾ ಗ್ರಾಮದ ನಿವಾಸಿಗಳಾದ ತ್ವಾಹಿದ್ (19), ಉಮ್ಮರ್ ಫಾರೂಕ್ (18) ಮತ್ತು ಮೊಹಮ್ಮದ್ ನಬೀಲ್ (18) ಎಂದು ಗುರುತಿಸಲಾಗಿದೆ.

ಈ ಮೂವರು, ದೇಲಂತಬೆಟ್ಟು ಶಾಲೆಯ ಪಕ್ಕದ ರಸ್ತೆಯ ಬದಿಯಲ್ಲಿ ಮತ್ತು ದೇಲಂತಬೆಟ್ಟು ಚರ್ಚಿನ ಕೆಳಗಿನ ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಹುಂಡಿಯನ್ನು ಒಡೆದು, ಹುಂಡಿಯಲ್ಲಿ ಸಂಗ್ರಹವಾಗಿದ್ದ ಸುಮಾರು 12,000 ದಿಂದ 15,000 ರೂಪಾಯಿಗಳನ್ನು ಕಳವು ಮಾಡಿದ್ದಾರೆ ಎಂದು ನಾರಾಯಣ ಅವರು ದೂರು ನೀಡಿದ್ದಾರೆ.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



