ಸುಳ್ಯ: ಅಕ್ರಮ ಕೆಂಪು ಕಲ್ಲು ಸಾಗಾಟ ಪ್ರಕರಣವನ್ನು ಬೇಧಿಸಿದ ಪೊಲೀಸರು ಲಾರಿ ಸಮೇತ ಚಾಲಕರನ್ನು ವಶಕ್ಕೆ ಪಡೆದುಕೊಂಡ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ನಾರ್ಕೊಡು ಎಂಬಲ್ಲಿ ಆ. 3 ರಂದು ನಡೆದಿದೆ.

ಎರಡು ಲಾರಿಯಲ್ಲಿ ಕಾನೂನು ಬಾಹಿರವಾಗಿ ಯಾವುದೇ ಪರವಾನಿಗೆ ಇಲ್ಲದೇ ಕೆಂಪು ಕಲ್ಲನ್ನು ಎಲ್ಲಿಂದಲೋ ಕದ್ದು ಸಾಗಾಟ ಮಾಡುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಈ ದಾಳಿ ನಡೆಸಿದ್ದಾರೆ.

ಲಾರಿಗಳನ್ನು ಹಾಗೂ ಲಾರಿಗಳ ಚಾಲಕರನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



