Breaking
19 Sep 2026, Sat

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಪಿ.ಕೋಟ್ಯಾನ್ ಆಯ್ಕೆ

ಬೆಳ್ತಂಗಡಿ: ತಾಲೂಕಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಆಡಳಿತ ಮಂಡಳಿಗೆ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಯುವ ಮುಂದಾಳು ಸಂತೋಷ್ ಕೋಟ್ಯಾನ್ ಬಳಂಜ ಆಯ್ಕೆಯಾದರು.

ಆ.3 ರಂದು ಸಂಘದ ವಾರ್ಷಿಕ ಮಹಾಸಭೆಯಲ್ಲಿ ನೂತನ ಸಮಿತಿ ರಚನೆ ಮಾಡಿ ಅಧ್ಯಕ್ಷರಾಗಿ ಘೋಷಣೆ ಮಾಡಲಾಯಿತು. ಒಂದೇ ಜಾತಿ,ಒಂದೇ ಮತ, ಒಬ್ಬನೇ ದೇವರು ಎಂಬ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಂದೇಶಗಳನ್ನು ಪರಿಪಾಲಿಸಿಕೊಂಡು ಬರುತ್ತಿರುವ ಬಳಂಜ ಬಿಲ್ಲವ ಸಂಘಕ್ಕೆ ಸುಮಾರು 46 ವರ್ಷಗಳ ಪರಂಪರೆಯಿದೆ.

ಕಳೆದ ನಾಲ್ಕು ವರ್ಷಗಳ ಹಿಂದೆ ಸುಮಾರು ರೂ. ಒಂದು ಕೋಟಿ ವೆಚ್ಚದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ನಿರ್ಮಾಣಗೊಂಡು ಲೋಕಾರ್ಪಣೆಗೊಂಡಿದೆ.

Leave a Reply

Your email address will not be published. Required fields are marked *