ಪುತ್ತೂರು: ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿ, ಜನರ ನೆಮ್ಮದಿಗೆ ಭಂಗ ಉಂಟು ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಸ್ಥಳೀಯರೇ ಹಿಡಿದು ಕೈಕಾಲು ಕಟ್ಟಿ ಪೊಲೀಸರಿಗೆ ಒಪ್ಪಿಸಿದ ಘಟನೆ ಪುತ್ತೂರಿನಲ್ಲಿ ಆ.3 ರಂದು ನಡೆದಿದೆ.
ನಿಷೇಧಿತ ಮಾದಕ ವಸ್ತು ಸೇವಿಸಿ ಈ ರೀತಿ ವರ್ತಿಸುತ್ತಿದ್ದಾನೆ ಎಂಬ ಶಂಕೆಯಲ್ಲಿ ಸ್ಥಳೀಯರು ಹಗ್ಗದಿಂದ ಆತನ ಕೈ-ಕಾಲು ಕಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈತ ಕಾಸರಗೋಡಿನ ಮುಳ್ಳೇರಿಯದ ವ್ಯಕ್ತಿ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಈ ವ್ಯಕ್ತಿಯನ್ನು ಈಶ್ವರಮಂಗಲ ಹೊರ ಠಾಣೆ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡು, ಸಂಪ್ಯ ಠಾಣೆಗೆ ಕರೆದು ಕೊಂಡು ಹೋಗಿದ್ದಾರೆ.

ಬಳಿಕ ವೈದ್ಯಕೀಯ ಪರೀಕ್ಷೆಗಾಗಿ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು,ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.



