Breaking
19 Sep 2026, Sat

ಮದಡ್ಕದ ಚಿಲಿಂಬಿಯಲ್ಲಿ ಗಾಂಜಾ ದಾಸ್ತಾನು ಇರಿಸಿದ್ದ ಆರೋಪಿ: ಪೊಲೀಸ್ ದಾಳಿ ವೇಳೆ ಪರಾರಿ

ಬೆಳ್ತಂಗಡಿ: ಮನೆಯೊಳಗೆ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಗಾಂಜಾ ಪ್ರಕರಣವನ್ನು ಪೊಲೀಸರು ಬೇಧಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಚಿಲಿಂಬಿ ಎಂಬಲ್ಲಿ ನಡೆದಿದೆ.

ದಾಳಿಯ ವೇಳೆ ಆರೋಪಿ ರಫೀಕ್ ಎಂಬಾತ ಪರಾರಿಯಾಗಿದ್ದಾನೆ.

ಈತ ತನ್ನ ಮನೆಯೊಳಗೆ 160 ಗ್ರಾಂ ಗಾಂಜಾ ಶೇಖರಿಸಿಟ್ಟ ಬಗ್ಗೆ ಪುಂಜಾಲಕಟ್ಟೆ ಪಿಎಸ್ಐ ರಾಜೇಶ್ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಗಾಂಜಾವನ್ನು ವಶಕ್ಕೆ ಪಡೆದು ಕೊಳ್ಳಲಾಗಿದ್ದು ಇವುಗಳ ಒಟ್ಟು ಮೌಲ್ಯ ಸುಮಾರು ರೂ.15,000 ಎಂದು ಅಂದಾಜಿಸಲಾಗಿದೆ.

ಆರೋಪಿ ರಫೀಕ್ ವಿರುದ್ಧ ಈ ಹಿಂದೆ ಹಲವು ಗಾಂಜಾ ಪ್ರಕರಣ ದಾಖಲಾಗಿದ್ದು, ಸದ್ಯದ ಈ ಪ್ರಕರಣವನ್ನು ಪುಂಜಾಲಕಟ್ಟೆ ಪೊಲೀಸರು ಹೆಚ್ಚಿನ ತನಿಖೆಗಾಗಿ, ಬೆಳ್ತಂಗಡಿ ಪೊಲೀಸರಿಗೆ ಹಸ್ತಾಂತರ ಮಾಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *