ಕುಂದಾಪುರ: ಬಸ್ಸೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಸಹ ಸವಾರೆ ಮೃತಪಟ್ಟು , ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕುಂದಾಪುರ ಸಂಗಮ್ ಜಂಕ್ಷನ್ ಸಮೀಪದ ನವಭಾರತ್ ಟಿಂಬರ್ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಹೊಸಮಠ ಚಾರುಕೊಟ್ಟಿಗೆ ನಿವಾಸಿ ಜಲಜಾ (64) ಎಂದು ಗುರುತಿಸಲಾಗಿದೆ.

ಇವರ ಪತಿ ಸ್ಕೂಟರ್ ಸವಾರ ನಾರಾಯಣ ಎಂಬವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಬ್ಬರು ಆನಗಳ್ಳಿಯಿಂದ ಚಾರುಕೊಟ್ಟಿಗೆ ಕಡೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದು, ಆಗ ಹಿಂದಿನಿಂದ ಬಂದ ಬಸ್, ಸ್ಕೂಟರ್ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಪರಿಣಾಮ ನಾರಾಯಣ ಹಾಗೂ ಜಲಜಾ ಇಬ್ಬರೂ ರಸ್ತೆಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡ ಜಲಜಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



