Breaking
23 Dec 2024, Mon

ಕೇರಳದಲ್ಲಿ ಮಂಕಿಪಾಕ್ಸ್ ಪತ್ತೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ

ಮಂಗಳೂರು: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಆರೋಗ್ಯ ಇಲಾಖೆಯು ಪ್ರಯಾಣಿಕರ ತಪಾಸಣೆಯನ್ನು ತೀವ್ರಗೊಳಿಸಿದೆ.ಶಂಕಿತ ಪ್ರಕರಣಗಳಿಗೆ ಚಿಕಿತ್ಸೆ ನೀಡಲು ವೆನ್ಲಾಕ್ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆಯಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಕ್ರೀನಿಂಗ್ ವೇಳೆ ಯಾವುದೇ ಪ್ರಯಾಣಿಕರಲ್ಲಿ ಪಾಸಿಟಿವ್ ಕಂಡುಬಂದರೆ, ಅವರನ್ನು ಚಿಕಿತ್ಸೆಗಾಗಿ ತಕ್ಷಣವೇ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ನಾಗರಿಕರು ಜಾಗರೂಕರಾಗಿರಬೇಕು ಮತ್ತು ರೋಗಲಕ್ಷಣಗಳ ಅನುಮಾನ ಕಂಡುಬಂದರೆ ತಕ್ಷಣವೇ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

Leave a Reply

Your email address will not be published. Required fields are marked *