Breaking
19 Sep 2026, Sat

ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ಪತ್ತೆಯಾದ ಶವದ ಅವಶೇಷ..!?

ಧರ್ಮಸ್ಥಳ: ಗ್ರಾಮದ ಮತ್ತು ಆಸುಪಾಸಿನ ಪ್ರದೇಶದಲ್ಲಿ ಕೊಲೆ ಮತ್ತು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಮೃತದೇಹಗಳನ್ನು ಬೆದರಿಸಿ ಹೂತು ಹಾಕಲಾಗಿದೆ ಎಂದು ಅನಾಮಿಕ ದೂರುದಾರ ನೀಡಿರುವ ಪ್ರಕರಣದ ತನಿಖೆ ಮುಂದುವರೆದಿದೆ.

ಈ ನಿಟ್ಟಿನಲ್ಲಿ ಇವತ್ತು 11ನೇ ಗುರುತಿನ ಪಕ್ಕ ಬಂಗ್ಲಗುಡ್ಡ ಅನ್ನುವ ಪ್ರದೇಶದಲ್ಲಿ ದೂರುದಾರ ಗುರುತಿಸುವ ಜಾಗದಲ್ಲಿ ಉತ್ಖನನ ನಡೆಸಲಾಗಿದ್ದು, ಶವದ ಅವಶೇಷ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಹೀಗಾಗಿ ಊಟಕ್ಕೂ ವಿರಾಮ ನೀಡದೆ ಎಸ್ಐಟಿ ಅಧಿಕಾರಿಗಳು ಕಾರ್ಯಾಚರಣೆಯನ್ನು ಮುಂದುವರೆಸುತ್ತಿದ್ದಾರೆ ಅಂತ ಹೇಳಲಾಗುತ್ತಿದೆ.ನಿರಂತರವಾಗಿ ಶೋಧ ಕಾರ್ಯ ನಡೆಸಲಾಗುತ್ತಿದ್ದು, ಕೆಲ ಮೂಳೆಗಳು ಪತ್ತೆಯಾಗಿದ್ದು ವಿಧಿವಿಜ್ಞಾನ ಇಲಾಖಾ ಅಧಿಕಾರಿಗಳು ಅದನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಿದ್ದಾರೆ ಅನ್ನುವ ಮಾಹಿತಿ ಮಾಧ್ಯಮಗಳಿಗೆ ಲಭ್ಯವಾಗಿದೆ.

Leave a Reply

Your email address will not be published. Required fields are marked *