Breaking
13 Jul 2026, Mon

ಬ್ರಹ್ಮಾವರದಲ್ಲಿ ಕೂಲಿ ಕೆಲಸಕ್ಕೆ ಹೋದ ವ್ಯಕ್ತಿ ಮನೆಗೆ ಬಾರದೇ ನಾಪತ್ತೆ

ಉಡುಪಿ: ಕೂಲಿ ಕೆಲಸಕ್ಕೆಂದು ಮನೆಯಿಂದ ಹೋದ ವ್ಯಕ್ತಿಯೊಬ್ಬರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಪೆಜಮಂಗೂರು ಗ್ರಾಮದ ಕೊಕ್ಕರ್ಣೆ ಸಮೀಪದ ಕೆಳಪೇಟೆಯ ಎಂಬಲ್ಲಿ ನಡೆದಿದೆ.

ಕೊಕ್ಕರ್ಣೆಯ ಕೆಳಪೇಟೆಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಸುರೇಂದ್ರ ನಾಯ್ಕ (36) ಎಂಬವರು ಜೂನ್ 28 ರಂದು ಕೂಲಿ ಕೆಲಸಕ್ಕೆಂದು ಮನೆಯಿಂದ ಹೋದವರು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ಸುರೇಂದ್ರ ನಾಯ್ಕ ಅವರು 5 ಅಡಿ 6 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *