Breaking
19 Sep 2026, Sat

ಕಾಪು: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಪಲ್ಟಿ; 7 ಮಂದಿ ಮೀನುಗಾರರ ರಕ್ಷಣೆ

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಮಗುಚಿ ಬಿದ್ದು, ಅದರಲ್ಲಿದ್ದ ಏಳು ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಜಿಲ್ಲೆಯ ಕಾಪು ಲೈಟ್‌ಹೌಸ್ ಬಳಿ ಆ.04ರಂದು ಸಂಭವಿಸಿದೆ.

ಮೀನುಗಾರಿಕೆಗಾಗಿ ಮಲ್ಪೆಯಿಂದ ತೆರಳಿದ್ದ ಟ್ರಾಲ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಮಗುಚಿ ಬಿದ್ದಿದ್ದು, ಕೂಡಲೇ ಸ್ಥಳೀಯ ಮೀನುಗಾರರಾದ ಪ್ರಶಾಂತ್ ಮತ್ತು ವಿನೋದ್ ದೋಣಿಯಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *