Breaking
12 May 2026, Tue

ಫುಟ್ಬಾಲ್ ಪಂದ್ಯಾಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ ಹಾಗೂ ವಿವೇಕಾನಂದ ಪ.ಪೂ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಆಗಸ್ಟ್1 ರಂದು ವಿವೇಕಾನಂದ ಪ. ಪೂ ಕಾಲೇಜಿನಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಬಾಲಕರ ವಿಭಾಗವು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಆಗಸ್ಟ್ 26 ರಂದು ಮೂಡಬಿದ್ರೆ ರೋಟರಿ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಈ ಫುಟ್ಬಾಲ್ ಪಂದ್ಯಾಟದ ನಡೆಯಲಿದೆ. ಈ ನಿಟ್ಟಿನಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *