Breaking
19 Sep 2026, Sat

ಉಪ್ಪಿನಂಗಡಿ ಸರ್ಕಾರಿ ಉನ್ನತ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 29 ನೇ ವರ್ಷದ ವಾರ್ಷಿಕ ಮಹಾಸಭೆ ಮತ್ತು ಶ್ರಾವಣ ವಿಶೇಷ ಕಾರ್ಯಕ್ರಮ

ಉಪ್ಪಿನಂಗಡಿ: ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ.) ಉಪ್ಪಿನಂಗಡಿ ಹಾಗೂ ಚಿಂತನಗಂಗಾ ಮನವಳಿಕೆ ಇವುಗಳ ಜಂಟಿ ಆಶ್ರಯದಲ್ಲಿ ಉಪ್ಪಿನಂಗಡಿ ಸರ್ಕಾರಿ ಉನ್ನತ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 29 ನೇ ವರ್ಷದ ವಾರ್ಷಿಕ ಮಹಾಸಭೆ ಮತ್ತು ಶ್ರಾವಣ ವಿಶೇಷ ಕಾರ್ಯಕ್ರಮ ಆಗಸ್ಟ್ 03 ರಂದು ನಡೆಯಿತು.

ಸಂಘದ ಅಧ್ಯಕ್ಷರಾದ ಪುಳಿತ್ತಡಿ ಹರೀಶ್ ಆಚಾರ್ಯ ರವರು ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಚಿನ್ನದ ಕೆಲಸಗಾರರ ಸಂಘ (ರಿ.) ಮಂಗಳೂರು ಇದರ ಅಧ್ಯಕ್ಷರಾದ ಕೆ. ಎಲ್. ಹರೀಶ್. ಆಚಾರ್ಯ, ಹಾಗೂ ಉಪ್ಪಿನಂಗಡಿ ಕಾಳಿಕಾಂಬಾ ಮಹಿಳಾ ಸಂಘದ ಸುಪ್ರಿಯ ರಮೇಶ್ ಆಚಾರ್ಯ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *